ಶಿರಾಡಿ, ಜು 13: ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ಹೆದ್ದಾರಿಯ ಶಿರಾಡಿಯಲ್ಲಿ ಕಾಂಕ್ರೀಟೀಕರಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು ಪರಿಶೀಲನೆ ನಡೆಸಿದರು.
ಶಿರಾಡಿ ಘಾಟ್ ರಸ್ತೆಯನ್ನು ಸಂಚಾರ ಮುಕ್ತಗೊಳಿಸುವಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ರು. ಇನ್ನು ಕಾಮಗಾರಿ ಪ್ರದೇಶಕ್ಕೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಭೇಟಿ ನೀಡಿ ಕಾಮಗಾರಿ ಬಗ್ಗೆ ಎಂಜಿನಿಯರ್ ಗಳ ಚರ್ಚೆ ನಡೆಸಿ ಮಾಹಿತಿಯನ್ನು ಪಡೆದುಕೊಂಡಿದ್ದರು. ಅಲ್ಲದೆ ಜುಲೈ ೧೫ರಂದು ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆಯನ್ನು ನೀಡಿದ್ದಾರೆ. ಅಲ್ಲದೆ ಸಚಿವ ಯು.ಟಿ. ಖಾದರ್ ಕೂಡ ಶಿರಾಡಿ ಮೂಲಕ ಜುಲೈ ೧೬ರರೊಳಗೆ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.