ತುಮಕೂರು, ಜು 15: ರಾಜ್ಯದ ಸಮ್ಮಿಶ್ರ ಸರಕಾರದ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ. ಸಮ್ಮಿಶ್ರ ಸರಕಾರ ಪತನವಾಗುವುದು ಶತ ಸಿದ್ಧ ಎಂದು ಡಿವಿಎಸ್ ಭವಿಷ್ಯ ನುಡಿದಿದ್ದಾರೆ.
ತುಮಕೂರಿನಲ್ಲಿ ನಡೆದ ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುಗಿಯುವ ಮೊದಲು ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರದ ಅಂತ್ಯವಾಗಲಿದೆ ಎಂದಿದ್ದಾರೆ. ಲೋಕಸಭೆ ಚುನಾವಣೆ ಸಮಯದಲ್ಲಿ ಸೀಟು ಹಂಚಿಕೆ ವಿಷಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಎದ್ದು ಮೈತ್ರಿ ಸರ್ಕಾರ ಮುರಿದು ಬೀಳುವುದು ಖಚಿತ ಎಂದು ಸದಾನಂದಗೌಡ ಅವರು ವಿಶ್ವಾಸದಿಂದ ಹೇಳಿದರು. ಇನ್ನು ಇತ್ತೀಚಿಗೆ ಸಿಎಂ ಕುಮಾರಸ್ವಾಮಿ ಮಂಡಿಸಿದ ಬಜೆಟ್ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಕುಮಾರಸ್ವಾಮಿ ಮಂಡಿಸಿದ ಬಜೆಟ್ ನಲ್ಲಿ ತಾರತಮ್ಯ ಮಾಡಲಾಗಿದೆ. ಅದೊಂದು ಅರ್ಥವಿಲ್ಲದ ಬಜೆಟ್ ಎಂದು ಅವರು ಟೀಕಿಸಿದರು.