ಮಂಗಳೂರು, ಜು 17: ಸುರತ್ಕಲ್ ಕಾಟಿಪಳ್ಳದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ಕೃಷ್ಣಾಪುರದ ಸಫ್ವಾನ್ ಯಾನೆ ಚಪ್ಪು(23) ಬಂಧಿತ ಆರೋಪಿ.
ಈತನನ್ನು ಸುರತ್ಕಲ್ ಸಮೀಪದ ಮುಕ್ಕದಿಂದ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಪ್ರಕರಣದ ತನಿಖಾಧಿಕಾರಿಯವರಾದ ಸಂಚಾರ ಉಪವಿಭಾಗದ ಎಸಿಪಿ ಮಂಜುನಾಥ ಶೆಟ್ಟಿಯವರಿಗೆ ಹಸ್ತಾಂತರಿಸಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ೧೨ ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು ಜನವರಿ 3ರಂದು ಮಧ್ಯಾಹ್ನ 1. 15ಕ್ಕೆ ಕಾಟಿಪಳ್ಳದ ಅಬ್ದುಲ್ ಮಜೀದ್ ಎಂಬವರ ಮನೆಯ ಎದುರು ಅವರ ಮೊಬೈಲ್ ಅಂಗಡಿಯ ಕರೆನ್ಸಿಯ ಹಣವನ್ನು ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ದೀಪಕ್ ರಾವ್ ನನ್ನು ಬಿಳಿ ಬಣ್ಣದ ಮಾರುತಿ ಸ್ವಿಪ್ಟ್ ಕಾರಿನಲ್ಲಿ ಬಂದ 4 ಮಂದಿ ದುಷ್ಕರ್ಮಿಗಳ ತಂಡ ಏಕಾಎಕಿ ತಲ್ವಾರ್ ನಿಂದ ದಾಳಿ ನಡೆಸಿದ್ದು, ದೀಪಕ್ ರಾವ್ ಸ್ಥಳದಲ್ಲೇ ಮೃತಪಟ್ಟಿದ್ದರು.