ಉಡುಪಿ, ಜು 19: ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಬಗ್ಗೆ ಹಲವು ಅನುಮಾನಗಳು ಕಾಡುತ್ತಿರುವ ಹಿನ್ನಲೆಯಲ್ಲಿ ಅವರ ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕ ಅವಿನಾಶ್ ಶೆಟ್ಟಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫುಡ್ ಪಾಯಿಷನ್ ಆಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ನಮ್ಮೆಲ್ಲಾ ವೈದ್ಯರ ತಂಡದ ಪ್ರಯತ್ನಗಳ ಬಳಿಕವೂ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ, ಇಂದು ಬೆಳಗ್ಗೆ ಅವರು ಅಂಗಾಗಗಳ ವೈಫಲ್ಯದಿಂದ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನೊಂದೆಡೆ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಸಾವಿನ ಬಗ್ಗೆ ಹಲವು ಅನುಮಾನಗಳು ಕಾಡುತ್ತಿರುವ ಹಿನ್ನಲೆಯಲ್ಲಿ ಮರಣೋತ್ತರ ಪರೀಕ್ಷೆ ನಿರ್ಧರಿಸಲಾಗಿದೆ ಎಂದಿದ್ದಾರೆ.
ಅವರು ಸೇವಿಸಿರುವ ಆಹಾರವೇ ವಿಷವಾಗಿದೆಯಾದ ಅಥವಾ ಅವರು ಸೇವಿಸಿದ ಆಹಾರಕ್ಕೆ ವಿಷ ಬೆರೆಸಲಾಗಿದೆ ಎಂಬುವುದು ಇನ್ನು ಖಚಿತವಾಗಿಲ್ಲ. ಹೀಗಾಗಿ ಅನುಮಾನಗಳನ್ನು ಬಗೆಹರಿಸುವ ಸಲುವಾಗಿ ಮರಣೋತ್ತರ ಪರೀಕ್ಷೆಗೆ ಪಾರ್ಥೀವ ಶರೀರವನ್ನು ರವಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.