ಪುತ್ತೂರು, ಸೆ 30: ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಸಂಚಾಲಕ ಜಗದೀಶ್ ಕಾರಂತ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪುತ್ತೂರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಪುತ್ತೂರು ಠಾಣಾ ಪಿಎಸ್ಐ ಗೆ ನಿಂದನೆ ಮಾಡಿರುವ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಜಗದೀಶ್ ಕಾರಂತ್ ಗೆ ಇದೀಗ ಜಾಮೀನು ಮಂಜೂರಾಗಿದೆ.
ಶುಕ್ರವಾರ ತಡರಾತ್ರಿಯ ವೇಳೆಗೆ ಕಾರಂತ್ ಅವರನ್ನು ಪುತ್ತೂರಿನಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅದರಂತೆ ಪುತ್ತೂರು ಕೋರ್ಟ್ ಕಾರಂತ್ ಗೆ ಜಾಮೀನು ಮಂಜೂರು ಮಾಡಿದ್ದು, ಅಕ್ಟೋಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.