ಬೆಂಗಳೂರು, ಜು 26: ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಜೆ ಆರ್ ಲೋಬೊ ಅರ್ಜಿಯನ್ನು ವಿಚಾರಣೆಗೆ ಪರಿಣಿಸಿರುವ ಹೈಕೋರ್ಟ್ ಬುಧವಾರ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ೧೦ ಮಂದಿಗೆ ನೋಟಿಸ್ ಜಾರಿಗೊಳಿಸಿದೆ. ವಿದ್ಯುನ್ಮಾನ ಮತಯಂತ್ರ ದುರ್ಬಳಕೆ ಮಾಡಿಕೊಂಡು ಚುನಾವಣೆಯಲ್ಲಿ ಗೆಲವು ಸಾಧಿಸಿದ್ದಾರೆ . ಪ್ರಜಾಪ್ರತಿನಿಧಿ ಕಾಯ್ದೆ ವಿರುದ್ಧವಾಗಿ ನಡೆದುಕೊಂಡಿರುವ ಅವರ ಶಾಸಕತ್ವ ಅನರ್ಹಗೊಳಿಸಬೇಕು. ಎಂಬ ಆಕ್ಷೇಪಣೆಯೊಂದಿಗೆ ಸಲ್ಲಿಕೆಯಾಗಿರುವ ಚುನಾವಣಾ ತಕರಾರು ಅರ್ಜಿ ಸಂಬಂಧ ಈ ನೋಟಿಸ್ ಜಾರಿ ಮಾಡಿದೆ. ಲೋಬೊ ಅವರ ಪರ ವಕೀಲ ರವೀಂದ್ರನಾಥ್ ಕಾಮತ್ ವಾದ ಮಂಡಿಸುತ್ತಿದ್ದಾರೆ.
ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡ ನ್ಯಾ. ಬಿ. ವೀರಪ್ಪ ಅವರಿದ್ದ ಏಕಸದಸ್ಯ ಪೀಠ , ಶಾಸಕ ವೇದವ್ಯಾಸ್ ಕಾಮತ್ , ರತ್ನಾಕರ ಸುವರ್ಣ, ಸುನೀಲ್ ಕುಮಾರ್ ಬಜಾಲ್ , ಧರ್ಮೇಂದ್ರ ಸಹಿತ 10 ಮಂದಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಆಗಸ್ಟ್ 16 ರಂದು ಮುಂದೂಡಿತು.
ಕಾಂಗ್ರೆಸ್ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಬಿ.ಎ ಮೊಯಿದೀನ್ ಬಾವಾ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ ಭರತ್ ಶೆಟ್ಟಿ ಅವರ ಶಾಸಕತ್ವ ಅಸಿಂಧು ಎಂದು ಘೋಷಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಎರಡು ವಾರಗಳ ಕಾಲ ವಿಚಾರಣೆ ಮುಂದೂಡಿದೆ.