ಸುಳ್ಯ, ಜು 26: ಮಾಣಿ - ಮೈಸೂರು ರಾಜ್ಯ ಹೆದ್ದಾರಿ ಕೊಡಗು ಜಿಲ್ಲೆಯ ಕಾಟಿಗೇರಿ ಸಮೀಪ ಕುಸಿತಗೊಂಡಿದ್ದು ವಾಹನ ಸಂಚಾರಕ್ಕೆ ಅಪಾಯ ಎದುರಾಗಿದೆ. ಕಳೆದ ಒಂದುವರೆ ತಿಂಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ರಾಜ್ಯ ಹೆದ್ದಾರಿ ಅನೇಕ ಕಡೆ ಬಿರುಕು ಕಾಣಿಸಿಕೊಂಡಿವೆ.
ಕಾಟಿಗೇರಿ ಸಮೀಪ ರಸ್ತೆ ಬಿರುಕು ಕಾಣಿಸಿಕೊಂಡಿರುವ ಪರಿಣಾಮ ವಾಹನ ಸವಾರರು ಆತಂಕದಲ್ಲಿಯೇ ವಾಹನ ಚಲಾಯಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಪೊಲೀಸರು ಮುಂಜಾಗೃತ ಕ್ರಮವಾಗಿ ಅಲ್ಲಲ್ಲಿ ಬ್ಯಾರಿ ಕ್ಯಾಡ್ಗಳನ್ನು ಅಳವಡಿಸಿದ್ದಾರೆ. ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿರುವ ಪರಿಣಾಮ ರಸ್ತೆ ಸಂಪೂರ್ಣ ಕುಸಿಯುವ ಭೀತಿ ಎದುರಾಗಿದ್ದು ಕೊಡಗು ಜಿಲ್ಲಾಡಳಿತ ನಿಗಾ ವಹಿಸಿದೆ. ಇನ್ನು ನಿರಂತರ ಮಳೆಯಿಂದ ಹೆದ್ದಾರಿ ಪಕ್ಕದಲ್ಲಿ ಕುಸಿಯುತ್ತಿರುವುದು, ಕಾಮಗಾರಿ ಸಮರ್ಪಕವಾಗಿ ನಡೆದಿದೆಯಾ ಅನ್ನೋದರ ಸಂಶಯಕ್ಕೆ ಕಾರಣವಾಗಿದೆ.