ಮಂಗಳೂರು, ಜ.26: ಶತಮಾನದ ಸುದೀರ್ಘ ಚಂದ್ರ ಗ್ರಹಣ ಇಂದು ನಡೆಯಲಿದ್ದು, ಇಡೀ ವಿಶ್ವವೇ ಆಕಾಶದ ಕೌತುಕಕ್ಕೆ ಕುತೂಹಲದಿಂದ ಎದುರು ನೋಡುತ್ತಿದೆ. ಈ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಮಣ್ಯ ಕ್ಷೇತ್ರದಲ್ಲಿ ರಾತ್ರಿ 7 ಗಂಟೆಯ ಬಳಿಕ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.
ಕುಕ್ಕೆ ಸುಬ್ರಮಣ್ಯ ಕ್ಷೇತ್ರದಲ್ಲಿನ ಪೂಜಾ ವೇಳಾ ಪಟ್ಟಿಗಳಲ್ಲಿ ಬದಲಾವಣೆ ಮಾಡಲಾಗಿದೆ. ಅದಲ್ಲದೆ, ದೇವರ ದರ್ಶನದ ಅವಧಿಯಲ್ಲೂ ತುಸು ವ್ಯತ್ಯಾಸ ಮಾಡಲಾಗಿದೆ. ಇಂದು 7 ಗಂಟೆಯ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ರಾತ್ರಿ ನಡೆಯುವ ಮಹಾ ಪೂಜೆ ಸಂಜೆ 6.30ಕ್ಕೆ ನೆರವೇರುವುದು ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಮಾತ್ರವಲ್ಲ, ಸಂಜೆ ನಡೆಯುವ ಆಶ್ಲೇಷ ಬಲಿ ಸೇವೆ ಕೂಡ ಚಂದ್ರ ಗ್ರಹಣದ ಹಿನ್ನಲೆಯಲ್ಲಿ ಇರುವುದಿಲ್ಲ ಹಾಗೂ ರಾತ್ರಿ ದೇವಸ್ಥಾನದಲ್ಲಿ ನಡೆಯುವ ಅನ್ನಸಂತರ್ಪಣೆ ಕೂಡ ನಡೆಯುವುದಿಲ್ಲ ಎಂದು ದೇಗುಲದ ಮುಖ್ಯ ಕಾರ್ಯ ನಿರ್ವಣಾಧಿಕಾರಿ ರವೀಂದ್ರ ಎಂ. ಎಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.