ಮಂಗಳೂರು, ಜು 27: ಮೂಡುಶೆಡ್ಡೆ ಬೈಲು ಎಂಬಲ್ಲಿ ಮನೆಯ ಹಟ್ಟಿಯಿಂದ ಎರಡು ದನಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಇಮ್ರಾನ್ ಹಾಗೂ ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದೆ.
ಇಲ್ಲಿನ ಪುರುಷೋತ್ತಮ ಎಂಬುವವರ ಮನೆಯ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನಗಳನ್ನು ಮನೆಯವರಿಗೆ ಬೆದರಿಕೆಯೊಡ್ಡಿ ಕದ್ದೊಯ್ದಿದ್ದರು. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನೂ ರಚಿಸಲಾಗಿದ್ದು, ಇದೀಗ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.