ಬೆಂಗಳೂರು, ಜುಲೈ 28: ಸಮ್ಮಿಶ್ರ ಸರ್ಕಾರದ ಯಶಸ್ಸನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಲ್ಲವನ್ನೂ ಅದು ಕಾಮಾಲೆ ಕಣ್ಣಿನಿಂದ ನೋಡುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.
ಸಮ್ಮಿಶ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಅಖಂಡ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿದ್ದೇವೆ. 40 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದೇವೆ. ಮಾತ್ರವಲ್ಲ, ಅಖಂಡ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಶ್ರಮ ವಹಿಸುತ್ತಿದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಬಿಜೆಪಿ ತನ್ನ ಅನುಕೂಲತೆಗೆ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಸಚಿವ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ. ಪಾದಯಾತ್ರೆಯಲ್ಲಿ ರೈತರು, ಸ್ಥಳೀಯರು ಭಾಗಿಯಾಗಿಲ್ಲ. ಹಸಿರು ಶಾಲು ಹಾಕಿಕೊಂಡವರೆಲ್ಲರೂ ರೈತರಾಗಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.