ಮಂಗಳೂರು, ಸೆ 30: ಗಡಿನಾಡು ಕೇರಳಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಆಗಮನದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಅಕ್ಟೋಬರ್ 2 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇರಳ ಗಡಿನಾಡು ಕಾಸರಗೋಡಿನ ತಲಪಾಡಿಯವರೆಗೆ ವಾಹನ ಜಾಥಾ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಮಂಗಳೂರಿನಿಂದ ಕೇರಳಕ್ಕೆ ತೆರಳಲಿರುವ ಈ ಜಾಥಾವನ್ನು ಬಿಜೆಪಿ ರಾಷ್ಟ್ರೀಯ ನಾಯಕ ಅಮಿತ್ ಷಾ ಮುನ್ನಡೆಸಲಿದ್ದಾರೆ. ಮಂಗಳೂರಿನಲ್ಲಿ ನಡೆಯುವ ವಾಹನ ಜಾಥದಲ್ಲಿ ಸುಮಾರು 250 ಕ್ಕಿಂತ 300 ರಷ್ಟು ವಾಹನಗಳು ಭಾಗಿಯಾಗಲಿದ್ದು, ಇದರ ಜೊತೆಗೆ ಬಿಜೆಪಿ ಕೇಂದ್ರ ಸರಕಾರದ ಜನಪರ ಯೋಜನೆಗಳು, ಸಾಧನೆಗಳನ್ನು ಕಾರ್ಯಕರ್ತರು ಪ್ರಚಾರ ಪಡಿಸಲಿದ್ದಾರೆ ಎಂದು ಸಂಜೀವ ಮಠಂದೂರು ತಿಳಿಸಿದರು.