ಬೈಂದೂರು, ಜು 30: ಬೈಂದೂರು ತಾಲೂಕು ವ್ಯಾಪ್ತಿಯ ಉಪ್ಪುಂದದಲ್ಲಿರುವ ಇಲೆಕ್ಟ್ರಿಕ್ ಅಂಗಡಿಯಲ್ಲಿ ಜು 30 ರ ಸೋಮವಾರ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಇಲೆಕ್ಟ್ರಿಕ್ ಸೊತ್ತುಗಳು ಸುಟ್ಟು ಕರಕಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66 ರ ಸಮೀಪದಲ್ಲೇ ಇರುವ ಸುರೇಶ್ ಪೂಜಾರಿ ಮಾಲಕತ್ವದ ಆನೆಗಣಪತಿ ಇಲೆಕ್ಟ್ರಿಕಲ್ ಅಂಗಡಿಯಲ್ಲಿ ಬೆಂಕಿ ದುರಂತ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು ಸುಮಾರು 20 ಲಕ್ಷ ಮೌಲ್ಯದ ಇಲೆಕ್ಟ್ರಿಕಲ್ ಸಾಮಾನುಗಳಿಗೆ ಬೆಂಕಿಗಾಹುತಿಯಾಗಿದೆ. ಇನ್ನು ಬೆಂಕಿಯ ಕೆನ್ನಾಲಿಗೆಗೆ ಪಕ್ಕದ ಬೇಕರಿ ಹಾಗೂ ಫ್ಯಾನ್ಸಿ ಅಂಗಡಿಗೂ ಹಾನಿಯಾಗಿದೆ. ಅಗ್ನಿಶಾಮಕದಳದವರು ಸ್ಥಳಕ್ಕಾಗಮಿಸಿ ಬೆಂಕಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.