ಬೆಂಗಳೂರು, ಆ 01: ದನದ ವ್ಯಾಪಾರಿ ಹಸನಬ್ಬ ಅವರ ಅನುಮಾನಸ್ಪದ ಸಾವಿನ ಪ್ರಕರಣದಲ್ಲಿ ಶಾಮೀಲಾದ ಆರೋಪ ಎದುರಿಸುತ್ತಿರುವ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್ ಐ ಡಿ ಎನ್ ಕುಮಾರ್ ಗೆ ಕೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾ| ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಬಾರದು. ತನಿಖೆಗೆ ಸಹಕರಿಸಬೇಕು ಮತ್ತಿತ್ತರ ಷರತ್ತುಗಳನ್ನು ವಿಧಿಸಿ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಜಾಮೀನು ನೀಡಲು ನಿರಾಕರಿಸಿದ್ದ ಉಡುಪಿ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪಿಎಸ್ ಐ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.