ನೆಲ್ಯಾಡಿ, ಆ 05: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯೋರ್ವ ಶವವಾಗಿ ಪತ್ತೆಯಾದ ಘಟನೆ ನೆಲ್ಯಾಡಿ ಸಮೀಪದ ಕೊಲ್ಪೆ ಎಂಬಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಗೋವಿಂದರಾಜ್ (53) ಎಂದು ಗುರುತಿಸಲಾಗಿದೆ. ಇವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಾಪತ್ತೆ ವಿಚಾರದಲ್ಲಿ ಪೋಲಿಸ್ ಠಾಣೆಯಲ್ಲಿ ಮೌಖಿಕವಾಗಿ ದೂರು ನೀಡಿದ್ದರೂ ಪ್ರಕರಣ ದಾಖಲಾಗಿರಲಿಲ್ಲ.
ಇವರು ಕಾಣೆಯಾಗುವ ಮೊದಲು ಕೋಳಿ ವಿಚಾರದಲ್ಲಿ ಪಕ್ಕದ ಮನೆಯವರೊಂದಿಗೆ ಜಗಳವಾಗಿತ್ತು ಎನ್ನಲಾಗುತ್ತಿದೆ.ಈಗ ಶವ ಬಾವಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಸಂಶಯ ಅಲ್ಲಿನ ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ