ಉಡುಪಿ ಅ 5: “ಮಂತ್ರಿ ಪದವಿಗಾಗಿ ಎಲ್ಲೂ ಬೇಡಿಕೆ ಮಾಡಿಲ್ಲ. ತಾನಾಗಿಯೇ ಮಂತ್ರಿ ಪದವಿ ಕೈ ಸೇರಿದ್ದು ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇನೆ” ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಹೇಳಿದ್ದಾರೆ. ಅವರು ರವಿವಾರದಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಬಳಿಕ ಬನ್ನಂಜೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಗೆ ಅಗತ್ಯ ಎನಿಸಿರುವ ಎಲ್ಲಾ ಯೋಜನೆಗಳನ್ನು ಪಕ್ಷದ ಹಿರಿಯ ಮುಂಖಡರೊಂದಿಗೆ ಚರ್ಚಿಸಿ ಅಭಿವೃದ್ದಿ ಕಾರ್ಯಗಳನ್ನು ನಡೆಸುತ್ತೇನೆ ಎಂದರು.
ಇನ್ನು ಜಿಲ್ಲೆಯಲ್ಲಿನ ಅಪರಾಧ ಕೃತ್ಯಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಪೋಲಿಸ್ ಇಲಾಖೆ ಪ್ರಕರಣದ ತನಿಖೆಯನ್ನು ನಿಸ್ಪಕ್ಷಪಾತವಾಗಿ ನಡೆಸುತ್ತಿದೆ. ಹೀಗಾಗಿ ಈ ಬಗ್ಗೆ ಪ್ರತಿಕ್ರಿಯಿಸುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಪೋಲಿಸ್ ಇಲಾಖೆಯೊಂದಿಗೆ ಮಾತುಕತೆ ನಡೆಸುತ್ತೇನೆ ಎಂದರು. ಇನ್ನು ಇದಕ್ಕೂ ಮುನ್ನ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಅವರು, ಕೃಷ್ಣನ ದರುಷನ ಪಡೆದರು. ಪರ್ಯಾಯ ಪಲಿಮಾರು ಶ್ರೀಗಳನ್ನು ಭೇಟಿ ಮಾಡಿದ್ದಾರೆ.