ಉಡುಪಿ, ಅ 8: ಕಾಲೇಜು ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಿವಾಹಿತನೊಬ್ಬನ ಮೇಲೆ ಉಡುಪಿ ಜಿಲ್ಲೆಯ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದೆ. ಪೆರ್ಡೂರು ಸಮೀಪದ ಬೈರಂಪಳ್ಳಿ ಗ್ರಾಮ ಪಂಚಾಯತ್ ಸದಸ್ಯನೊಬ್ಬನ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಆರೋಪ ವ್ಯಕ್ತವಾಗಿದ್ದು, ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದೆ.
ಈತ ಕುಲಾಲ ಸಮುದಾಯಕ್ಕೆ ಸೇರಿದ ಕುಂದಾಪುರ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಜುಲೈ 23 ರಂದು ವಿದ್ಯಾರ್ಥಿನಿ ಬೆಳಿಗ್ಗೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಬಸ್ಸು ತಂಗುದಾಣದಲ್ಲಿ ಬಸ್ಸಿಗೆ ಕಾಯುತ್ತಿದ್ದ ವೇಳೆ ಆರೋಪಿ ಕಿರುಕುಳ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ನಿರಂತರವಾಗಿ ಆರೋಪಿಯ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿ ತನ್ನ ಮನೆಯವರಿಗೆ ಈ ಬಗ್ಗೆ ತಿಳಿಸಿದ್ದಾಳೆ. ವಿದ್ಯಾರ್ಥಿನಿಯ ಅಣ್ಣ ಹಿರಿಯಡ್ಕ ಠಾಣೆಯಲ್ಲಿ ಆರೋಪಿಯ ವಿರುದ್ದ ದೂರು ದಾಖಲಿಸಿದ್ದಾರೆ. ಆರೋಪಿ ವಿವಾಹಿತನಾಗಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪೋಲಿಸರ ಕೈಗೆ ಸಿಗದೇ ಪರಾರಿಯಾಗಿದ್ದು ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.