ಆ 08: ತಮಿಳುನಾಡು ಡಿಎಂಕೆ ಸರ್ವೋಚ್ಚ ನಾಯಕ ಎಂ.ಕರುಣಾನಿಧಿಯವರ ಅವರ ಅಂತಿಮ ದರ್ಶನದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಿಂದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನ ಇರಿಸಲಾಗಿದ್ದ ರಾಜಾಜಿಹಾಲ್ ಹೊರಗೆ ನಡೆದ ನೂಕುನುಗ್ಗಲಿನಲ್ಲಿ ಇಬ್ಬರು ಮೃತಪಟ್ಟಿದ್ದರೆ, ಸುಮಾರು 15 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.
ರಾಜಾಜಿಹಾಲ್ನ ಗೆ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಬ್ಯಾರಿಕೇಡ್ ತಳ್ಳಿ ಒಳನುಗ್ಗಿ ಪ್ರವೇಶಿಸಿದ್ದೇ ನೂಕು ನುಗ್ಗಲಿಗೆ ಕಾರಣ ಎನ್ನಲಾಗಿದೆ. ಪೊಲೀಸರು ಜನರನ್ನು ನಿಯಂತ್ರಿಸಲು ಲಘು ಲಾಠಿಚಾರ್ಜ್ ಮಾಡಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಕರುಣಾನಿಧಿ ಪಾರ್ಥಿವ ಶರೀರದ ದರ್ಶನಕ್ಕೆ ಸಂಜೆ 4 ಗಂಟೆಯ ತನಕ ಅವಕಾಶ ನೀಡಲಾಗಿದೆ.
ಇನ್ನು ಕಾಲ್ತುಳಿತದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂಬ ವರದಿ ಹಿನ್ನೆಲೆಯಲ್ಲಿ ಕರುಣಾನಿಧಿ ಪುತ್ರ ಹಾಗೂ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು, ಶಾಂತಿ ಕಾಪಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಮಾಧ್ಯಮದವರೊಂದಿಗೆ ಸ್ಟಾಲಿನ್, ತಮಿಳುನಾಡು ಸರ್ಕಾರ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದು, ಜನ ಅದಕ್ಕೆ ಕಿವಿಗೊಡದೆ ಶಾಂತಿ ಕಾಪಾಡಬೇಕು ಮತ್ತು ಪ್ರತಿಯೊಬ್ಬರು ಕಲೈನಾರ್ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಬೇಕು ಎಂದು ಕೇಳಿಕೊಂಡಿದ್ದಾರೆ.