ಉಡುಪಿ, ಆ 9: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಇಬ್ಬರು ಯುವಕರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು, ಆ. 9 ರ ಗುರುವಾರ ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ.
ಎಸ್ ಐ ಟಿ ವಶಕ್ಕೆ ಪಡೆದ ಬಗ್ಗೆ ಉಡುಪಿ ಜಿಲ್ಲಾ ಪೊಲೀಸರು ಧೃಡಪಡಿಸಿದ್ದು, ವಶಕ್ಕೆ ಪಡೆದವರನ್ನು ಸಂದೇಶ್ ಶೆಟ್ಟಿ ಪಾದೆಬೆಟ್ಟು (28) ಹಾಗೂ ಯುವರಾಜ್ ಕಂಚಿನಡ್ಕ (30) ಎಂದು ಗುರುತಿಸಲಾಗಿದೆ. ಇವರು ಹಿಂದೂ ಜಾಗರಣ ವೇದಿಕೆಯಲ್ಲಿ ಗುರುತಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ. ಈಗಾಗಲೇ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವವರೊಂದಿಗೆ ಸಂಪರ್ಕ ಹೊಂದಿದ್ದರು ಎನ್ನುವ ಆರೋಪದಡಿಯಲ್ಲಿ, ಬೆಂಗಳೂರಿನಿಂದ ಆಗಮಿಸಿದ ಎಸ್ಐಟಿ ತನಿಖಾಧಿಕಾರಿಗಳ ತಂಡ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಅವರ ಮನೆಯಿಂದ ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ, ಇನ್ನು ವಶಕ್ಕೆ ಪಡೆದ ಇಬ್ಬರನ್ನು ಎಸ್ಐಟಿ ತನಿಖಾಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂದು ಮಾಹಿತಿ ದೊರಕಿದೆ.