ಬಂಟ್ವಾಳ, ಅ 9: ಸಿಡಿಲು ಬಡಿದು ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳದ ಸಿದ್ದಕಟ್ಟೆಯಲ್ಲಿ ನಸುಕಿನ ವೇಳೆ ಸಂಭವಿಸಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ.
ಇಲ್ಲಿನ ಕಾಲೇಜು ರಸ್ತೆಯ ಸೂರ್ಯಚಂದ್ರ ಜನರಲ್ ಸ್ಟೋರ್ ಸಿಡಿಲಿನ ಆಘಾತಕ್ಕೆ ಒಳಗಾಗಿದ್ದು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಅಂಗಡಿಯಲ್ಲಿದ್ದ ಫ್ರಿಜ್, ಕಪಾಟು, ದಿನಸಿ ಸಾಮಾನುಗಳು, ವಿದ್ಯುತ್ ಸಂಪರ್ಕ ಉಪಕರಣಗಳು ಸುಟ್ಟು ಭಸ್ಮವಾಗಿದ್ದು, ಗೋಡೆ ಬಿರುಕು ಬಿಟ್ಟಿದೆ. ಬೆಳಗ್ಗೆ ಸುಮಾರು ೪ ಗಂಟೆಯ ಹೊತ್ತಿಗೆ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರು ಆಗಮಿಸಿ ಬೆಂಕಿ ನಂದಿಸಿದ್ದರೂ ಅದಾಗಲೇ ಅಂಗಡಿ ಸಂಪೂರ್ಣ ಸುಟ್ಟು ಹೋಗಿತ್ತು. ಘಟನೆಯಿಂದ ಸುಮಾರು ನಾಲ್ಕೂವರೆ ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ. ಘಟನೆ ಕುರಿತು ಅಂಗಡಿ ಮಾಲಕ ಸುರೇಶ್ ಶೆಟ್ಟಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.