ನವದೆಹಲಿ, ಆ10: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ಅಪರಾಧಿಗಳನ್ನು ಬಿಡುಗಡೆ ಮಾಡುವ ಸಂಬಂಧ ನಿರ್ಧಾರ ಕೈಗೊಳ್ಳುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿನೆ ನೀಡಿತ್ತು. ಆದರೆ ರಾಜೀವ್ ಹಂತಕರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ತಿಳಿಸಿದೆ.
ಪ್ರಕರಣದ ಕುರಿತು ತನಿಖೆ ನಡೆಸಿದ್ದ ಸಿಬಿಐ 7 ಅಪರಾಧಿಗಳ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿತ್ತು. ತಮಿಳುನಾಡು ಜೈಲಿನಲ್ಲಿ 7 ಅಪರಾಧಿಗಳು 27 ವರ್ಷದಿಂದ ಸೆರೆವಾಸ ಅನುಭವಿಸುತ್ತಿದ್ದಾರೆ. ಈ ಅಪರಾಧಿಗಳನ್ನು ಬಿಡುಗಡೆ ಮಾಡಬೇಕೆಂದು ತಮಿಳುನಾಡು ಸರ್ಕಾರ ಮನವಿ ಮಾಡಿಕೊಂಡಿತ್ತು.
ಇದೀಗ ಕೇಂದ್ರ ಸರ್ಕಾರದ ಅನುಮತಿಯಿಲ್ಲದೇ ಅಪರಾಧಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.