ಬೆಳ್ತಂಗಡಿ ಆ10: ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಮರ್ಜಳದ ಸರಕಾರಿ ಗುಡ್ಡದಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಪೊಲೀಸರ ತಂಡ ದಾಳಿ ನಡೆಸಿ 7 ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.
ಜುಗಾರಿ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ್ ತಂಡ ಹಠಾತ್ ದಾಳಿ ನಡೆಸಿ ಗ್ರಾಮ ಪಂಚಾಯತ್ ಸದಸ್ಯ ಸೇರಿದಂತೆ 7 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ತಣ್ಣೀರುಪಂಥ ಗ್ರಾಮಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡ ಆದಂ, ಇಕ್ಬಾಲ್, ಮಹಮ್ಮದ್ ಶಾಫಿ, ಸುಂದರ ಆಚಾರಿ, ಲಕ್ಮಣ, ಸತೀಶ್ ಹಾಗೂ ನವೀನ್ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ ಪೊಲೀಸರು ಜುಗಾರಿ ಅಡ್ಡೆ ಮೇಲೆ ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸಿ ಸುಮಾರು 2.31 ಲಕ್ಷದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.