ಬಂಟ್ವಾಳ ಆ 14: ಆಗಸ್ಟ್ 29 ರಂದು ನಡೆಯುವ ಸ್ಥಳೀಯ ಚುನಾವಣೆಯಲ್ಲಿ ಎಲ್ಲಾ ಕ್ಷೇತಗಳಲ್ಲಿಯೂ ಭಾರತೀಯ ಜನತಾಪಾರ್ಟಿಯ ಅತ್ಯಂತ ಸಮರ್ಥ ಮತ್ತು ಪ್ರಭಾವಿ ಅಭ್ಯರ್ಥಿ ಗಳನ್ನು ಕಣಕ್ಕಿಳಿಸುತ್ತೆ ಹಾಗೂ ಸ್ಪಷ್ಟ ಬಹುಮತ ಪಡೆಯುತ್ತದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಸಿರೋಡಿನ ಪಕ್ಷದ ಕಚೇರಿಗೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.
ಶಾಸಕರ ಪರಿಶ್ರಮ ಹಾಗೂ ಬಿಜೆಪಿ ಪಕ್ಷದ ಸಂಘಟನೆಯ ಮೂಲಕ ಈ ಬಾರಿ ಬಂಟ್ವಾಳ ಪುರಸಭೆಯ ಚುನಾವಣೆಯಲ್ಲಿ ಅತ್ಯಧಿಕ ಅಭ್ಯರ್ಥಿ ಗಳು ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ಐದು ವರ್ಷ ಗಳಲ್ಲಿ ಕಾಂಗ್ರೇಸ್ ಪಕ್ಷ ಅತ್ಯಂತ ಕೆಟ್ಟದಾಗಿ ಆಡಳಿತ ನಡೆಸಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.ಅಸಮರ್ಪಕ ತ್ಯಾಜ್ಯ ನಿರ್ವಹಣೆ , ಚರಂಡಿ ಅವ್ಯವಸ್ಥೆ ಯಿಂದ ಪುರಸಭಾ ನಿವಾಸಿಗಳು ಬೆಸೆತ್ತು ಹೋಗಿದ್ದಾರೆ.ಹಾಗಾಗಿ ಈ ಬಂಟ್ವಾಳ ಪುರಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಸಮರ್ಥ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು, ಗೆಲುವು ಸಾಧಿಸಿದರೆ ಪುರಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಗೆ ಪೂರಕವಾಗುತ್ತೆ ಎಂದರು.ಈ ಹಿನ್ನೆಲೆಯಲ್ಲಿ ಜನಸಾಮಾನ್ಯರು ಪುರಸಭಾ ಚುನಾವಣೆಯಲ್ಲಿ ಯೋಚಿಸಿ ಬಿಜೆಪಿ ಬೆಂಬಲಿಸಿ ಎಂದು ಅವರು ಮನವಿ ಮಾಡಿದರು.
ಜಿಲ್ಲಾಧಿಕಾರಿಗೆ ಆಗ್ರಹ:
ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ರಾಜಕೀಯ ಚಟುವಟಿಕೆ ನೋಡುವಾಗ ಆಶ್ಚರ್ಯವಾಗುತ್ತೆ, ಪ್ರತಿ ಕ್ಷೇತ್ರದಲ್ಲಿ ಶಾಸಕರ ನೇತೃತ್ವದಲ್ಲಿ ಹಕ್ಕು ಪತ್ರ ವಿತರಣೆ ಮಾಡಲಾಗುತ್ತೆ ಆದರೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಮಾತ್ರ ಹಕ್ಕು ಪತ್ರ ವಿತರಣೆ ಮಾಡದಂತೆ ಜಿಲ್ಲಾಧಿಕಾರಿ ತಡೆ ಹಿಡಿಯಲು ಆದೇಶ ಮಾಡಿರುವುದು ಯಾವ ನ್ಯಾಯ ಎಂದರು.ಹಕ್ಕು ಪತ್ರ ವಿತರಣೆ ಮಾಡದಂತೆ ತಡೆ ಹಿಡಿಯುವ ಮೂಲಕ ಜಿಲ್ಲಾಧಿಕಾರಿ ಅವರು ಶಾಸಕರ ಹಕ್ಕು ಚ್ಯುತಿ ಮಾಡಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ. ಶೀಘ್ರವಾಗಿ ಜಿಲ್ಲಾಧಿಕಾರಿ ಯವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಕ್ಕು ಪತ್ರ ವಿತರಣೆ ಮಾಡುವ ಕೆಲಸ ಮಾಡಬೇಕಾಗಿದೆ.ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು, ಪ್ರಮುಖ ರಾದ ಸುಲೋಚನ ಜಿ.ಕೆ ಭಟ್. ದೇವದಾಸ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.