ಬೆಳ್ತಂಗಡಿ, ಆ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೊರಾಗಿತ್ತು. ಆದರೆ ಇಂದು ಸ್ವಲ್ಪ ಬಿಡುವು ನೀಡಿದೆ. ಬೆಳ್ತಂಗಡಿ ಹಾಗೂ ಚಾರ್ಮಾಡಿ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿತ್ತು. ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಿರ್ಮಾಣ ಹಂತದ ಮನೆಯೊಂದು ಕುಸಿದು ಬಿದ್ದಿದೆ.
ಮೇಲಂತಬೆಟ್ಟುವಿನ ಸ್ವರ್ಣಲತ ಎಂಬವರಿಗೆ ಸೇರಿದ ಮನೆಯಾಗಿದ್ದು ಸಂಪೂರ್ಣ ಧರಾಶಾಹಿಯಾಗಿದೆ. ಮನೆ ಕುಸಿತದಿಂದ ಮನೆ ಮಂದಿ ಕಂಗಾಲಾಗಿದ್ದಾರೆ. ಇನ್ನೂ ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿದ್ದಾರೆ. ಹಾಗೂ ಮನೆ ಮಂದಿಗೆ ಧೈರ್ಯ ತುಂಬಿದ್ದಾರೆ. ಪರಿಹಾರ ವಿತರಣೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇನ್ನು ಮನೆ ಕುಸಿತವಾಗುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ.