ಸುಬ್ರಹ್ಮಣ್ಯ, ಆ 15: ಘಾಟ್ ಪ್ರದೇಶ ಹಾಗೂ ಸುಬ್ರಹ್ಮಣ್ಯ ಆಸುಪಾಸಿನಲ್ಲಿ ಸುರಿದ ಧಾರಕಾರ ಮಳೆಯಿಂದಾಗಿ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ. ನದಿಯಲ್ಲಿನ ಹರಿವು ಏರಿಕೆಯಾಗಿ ಕುಮಾರಧಾರ ಸ್ನಾನಘಟ್ಟ ಜಲಾವೃತಗೊಂಡಿದೆ. ಅಲ್ಲದೆ ಶೌಚಾಲಯ, ಡ್ರೆಸ್ಸಿಂಗ್ ರೂಂ ಸಂಪೂರ್ಣ ಮುಳುಗಡೆಯಾಗಿದೆ.
ಅಂಗಡಿ ಮುಂಗಟ್ಟುಗಳು ಭಾಗಶಃ ಜಲಾವೃತಗೊಂಡಿದೆ. ಕುಮಾರಧಾರ ನದಿಯ ಉಪನದಿ ದರ್ಪಣ ತೀರ್ಥ ನದಿಯು ಉಕ್ಕಿ ಹರಿದು ಪಂಜ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ರಾಜ್ಯ ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದೆ. ಅಲ್ಲದೆ ನಿರಂತರ ಸುರಿದ ಮಳೆಯಿಂದಾಗಿ ಕುಮಾರಧಾರ ನದಿ ಪಾತ್ರದಲ್ಲಿರುವ ಕೃಷಿ ತೋಟಗಳಿಗೆ ನೀರು ನುಗ್ಗಿದ್ದು, ಅಪಾರ ಹಾನಿ ಸಂಭವಿಸಿದೆ.