ಲಾಸ್ ವೆಗಾಸ್ ನಲ್ಲಿ ಭಾನುವಾರ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ನಡೆದಿದ್ದು ಇಪ್ಪತ್ತಕ್ಕೂ ಹೆಚ್ಚು ಜನ ಸಾವನ್ನಪ್ಪಿ, ನೂರಾಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಘಟನೆಯಿಂದ ಅಮೇರಿಕ ಬೆಚ್ಚಿ ಬಿದ್ದಿದ್ದು,ಇದೊಂದು ಉಗ್ರ ಕೃತ್ಯ ಎಂದು ಅಂದಾಜಿಸಲಾಗಿದ್ದು ಹೈ ಅಲರ್ಟ್ ಘೋಷಿಸಲಾಗಿದೆ.ಮಂಡಾಲೇ ಬೇ ಕ್ಯಾಸಿನೋದಲ್ಲಿ ನಡೆಯುತ್ತಿದ್ದ ಮ್ಯೂಸಿಕ್ ಫೆಸ್ಟಿವಲ್ ಗುರಿಯಾಗಿರಿಸಿಕೊಂಡು ಸಭಿಕರ ನಡುವೆ ಇದ್ದ ವ್ಯಕ್ತಿಯೊಬ್ಬ ಮನ ಬಂದಂತೆ ಗುಂಡಿನ ದಾಳಿ ನಡೆಸಿರುವುದಾಗಿ ವರದಿಯಾಗಿದೆ.ಘಟನೆ ಗಮನಕ್ಕೆ ಬರುತ್ತಿದ್ದಂತೆ ಪೊಲೀಸರು, ಭದ್ರತಾ ಪಡೆಗಳು ಸಭಾಂಗಣವನ್ನು ಸುತ್ತುವರಿದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ. ಮ್ಯಾಂಡಲೆ ಬೇ ಹೊಟೇಲ್ ಮತ್ತು ಕ್ಯಾಸಿನೊದಿಂದ ಭಾನುವಾರದ ಘಟನೆಗೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.ಹೀಗಾಗಿ ಅಮೇರಿಕದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.