ಸುಳ್ಯ, ಆ 23(SM): “ಕೊಡಗು ಜಿಲ್ಲೆಯಲ್ಲಿ ನಡೆಯ ಬಾರದ ಘಟನೆ ನಡೆದಿದೆ. ಈ ಘೋರ ದುರಂತದಲ್ಲಿ ಅನೇಕ ಸಾವು ನೋವು ಸಂಭವಿಸಿದೆ. ಸೂರುಗಳನ್ನು ಕಳೆದುಕೊಂಡವರಿಗೆ ಶೀಘ್ರವೇ ವ್ಯವಸ್ಥೆ ಕಲ್ಪಿಸಲಾಗುವುದೆಂದು” ವೀರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಹೇಳಿದರು.
ಅವರು ಜೋಡುಪಾಲ, ಮದೆನಾಡು ಭಾಗದಲ್ಲಿ ಪ್ರಕೃತಿ ವಿಕೋಪಕ್ಕೊಳಗಾಗಿ ಅರಂತೋಡು, ಕಲ್ಲುಗುಂಡಿ, ಸಂಪಾಜೆ ನಿರಾಶ್ರಿತರ ಸಹಾಯ ಕೇಂದ್ರಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂದರ್ಭಲ್ಲಿ ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಚಂದ್ರ ಕಳಗಿ ಅವರು ಸಹಾಯ ಕೇಂದ್ರದಲ್ಲಿ ಆಗಬೇಕಾದ ಅಗತ್ಯ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು. ಮಡಿಕೇರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹರೀಶ್, ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ, ಮದೆನಾಡು ಗ್ರಾಮ ಪಂಚಾಯತ್ ಅದ್ಯಕ್ಷ ಧನಂಜಯ ಉಪಸ್ಥಿತರಿದ್ದರು.