ಬಂಟ್ವಾಳ, ಆ 24(SM): ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ಸಹ ಸವಾರೆ ಮೃತಪಟ್ಟ ಘಟನೆ ಕಬಕ ಸಮೀಪದ ನೀರಳಿಕೆ ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಉಪ್ಪಿನಂಗಡಿ ಸಮೀಪದ ಕರಾಯ ನಿವಾಸಿ ಮುಮ್ತಾಝ್(35) ಮೃತ ಮಹಿಳೆ. ಇವರು ತಮ್ಮ ಪತಿ ಅಶ್ರಫ್ ಜೊತೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ನೀರಳಿಕೆ ಎಂಬಲ್ಲಿ ಬೈಕ್ ತೆರಳುತ್ತಿದ್ದ ವೇಳೆ ರಸ್ತೆಯ ಗುಂಡಿ ತಪ್ಪಿಸಲು ಬೈಕ್ ಸವಾರ ಯತ್ನಿಸಿದ್ದಾನೆ. ಈ ಸಂದರ್ಭ ಹಿಂಬದಿ ಕುಳಿತ್ತಿದ್ದ ಅವರ ಪತ್ನಿ ಮುಮ್ತಾಝ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಘಟನೆಯ ತೀವ್ರತೆಗೆ ಮುಖಕ್ಕೆ ಗಂಭೀರ ಗಾಯವಾಗಿದ್ದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತಮಹಿಳೆಯ ಸಹೋದರ ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.