ಕಾಸರಗೋಡು, ಆ 28(SM): ಮೂರು ಕೊಲೆ ಸೇರಿದಂತೆ ಹಲವು ಪ್ರಕರಣದ ಆರೋಪಿಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಳದ ರಫೀಕ್(29) ಎಂದು ಗುರುತಿಸಲಾಗಿದೆ.
ಕಾಸರಗೋಡು ಹಾಗೂ ಕರ್ನಾಟಕದಲ್ಲಿ ಈತನ ವಿರುದ್ಧ ಕೊಲೆ, ಅಪಹರಣ ಸೇರಿದಂತೆ 13 ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಮಂಗಳೂರು ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಈತನನ್ನು ಬಂಧಿಸಿದ್ದರು. ಪುತ್ತೂರು ನಗರ, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಠಾಣೆಯಲ್ಲೂ ಈತನ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಯೊಂದಕ್ಕೆ ನುಗ್ಗಿ ಮಹಿಳೆಗೆ ಬೆದರಿಸಿದ ಪ್ರಕರಣದಲ್ಲೂ ಈತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ಮುಂದುವರೆದಿದೆ.