ಮಂಗಳೂರು, ಮಾ. 22 (DaijiworldNews/SM): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಸೋಮವಾರ 31 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 35,183ಕ್ಕೆ ಏರಿಕೆಯಾಗಿದೆ. ಈ ಪೈಕಿ 527 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 6,09,837 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 5,74,654 ಮಂದಿಯ ವರದಿ ನೆಗೆಟಿವ್ ಆಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆಯನ್ನು 33,914 ಕ್ಕೆ ತಲುಪಿದ್ದು, ಈ ಪೈಕಿ 30 ಜನರು ಸೋಮವಾರ ಬಿಡುಗಡೆಗೊಂಡಿದ್ದಾರೆ. ಸೋಮವಾರ ಒಂದು ಸೇರಿದಂತೆ ಒಟ್ಟು 742 ಸಾವುಗಳು ಈವರೆಗೆ ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಸೋಮವಾರ 113 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೋನಾ ವೈರಸ್ ಸಂಖ್ಯೆ 24,328ಕ್ಕೆ ಏರಿಕೆಯಾಗಿದೆ. ಈ ಪೈಕಿ 439 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 397,783 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಮವಾರ 32 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 23,699 ಕ್ಕೆ ಏರಿಕೆಯಾಗಿದೆ.
ಈವರೆಗೆ ಒಟ್ಟು 190 ಸಾವುಗಳು ಸಂಭವಿಸಿವೆ.