ಪುತ್ತೂರು, ಮಾ 23(DaijiworldNews/MS): ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.23ರ ಮಂಗಳವಾರ ಬೆಳ್ಳಿಪ್ಪಾಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಓದುತ್ತಿರುವ ಶ್ರೇಯಾ ಪಕ್ಕಳ (16 ) ಎಂದು ಗುರುತಿಸಲಾಗಿದೆ.
ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕುಂಡಾಪು ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿಯಾಗಿದ್ದಾಳೆ. ಆರೋಗ್ಯವಾಗಿದ್ದ ಶ್ರೇಯಾಳಿಗೆ ಏಕಾಏಕಿ ಇಂದು ಮುಂಜಾನೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಹೃದಯಾಘಾತದಿಂದ ನಿಧನರಾಗಿದ್ದಾರೆ.