ಬೆಳ್ತಂಗಡಿ, ಮಾ 24 (DaijiworldNews/MS): ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬೆಳ್ತಂಗಡಿ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮಾ.23 ರಂದು ರಾತ್ರಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಗಂಡಿಬಾಗಿಲು ದೇವಗಿರಿ ಚೇನಪಳ್ಳಿ ವಿಜು ಅವರ ಪುತ್ರಿ ವಿನ್ಸಿ(20) ಎಂದು ಗುರುತಿಸಲಾಗಿದೆ. ಈಕೆ ಮಾ.14 ರಂದು ಯಾವುದೋ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ತಕ್ಷಣ ಅವಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸುಮಾರು 10 ದಿನಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821