ಮಂಗಳೂರು, ಮಾ. 24 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಬುಧವಾರ 54 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 35,311ಕ್ಕೆ ಏರಿಕೆಯಾಗಿದೆ. ಈ ಪೈಕಿ 562 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 6,15,365 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 5,80,054 ನಕಾರತ್ಮಕವಾಗಿದೆ. ಈ ನಡುವೆ ಬುಧವಾರ 55 ಜನರನ್ನು ಬಿಡುಗಡೆ ಮಾಡಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 742 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಬುಧವಾರ 79 ಹೊಸ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 468 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 4,01,960 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಬುಧವಾರ 35 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 190 ಸಾವುಗಳು ಸಂಭವಿಸಿವೆ.