ಮಂಗಳೂರು, ಸೆ07(SS): ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸಕ್ಕಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗೌರವ ಸ್ವೀಕರಿಸಿ ನೇರವಾಗಿ ಉಡುಪಿಯತ್ತ ಪ್ರಯಾಣ ಬೆಳೆಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಮುಖ್ಯಮಂತ್ರಿಗಳು ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ್ದು, ನಂತರ ಎಲ್ಲವನ್ನೂ ಸಂಜೆಯೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ, ಸಚಿವರ ಸಮ್ಮುಖದಲ್ಲಿ ನಾನಾ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಮಂಗಳೂರಿನಲ್ಲಿ ಸಂಜೆ ವೇಳೆ ಸಭೆ ನಡೆಸಲಿದ್ದಾರೆ.