ಕಾಸರಗೋಡು, ಸೆ 7(SM): ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪೋಕ್ಸೋ ಪ್ರಕರಣದ ಆರೋಪಿಗೆ ಹತ್ತು ವರ್ಷ ಕಠಿಣ ಸಜೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಕರಿಂದಲ ಓಮಶ್ಯೆರಿಯ ಸದಾಶಿವ(45) ಎಂಬಾತ ಅಪರಾಧಿಯಾಗಿದ್ದು, ಕಠಿಣ ಸಜೆ ವಿಧಿಸಲಾಗಿದೆ. ಪೋಕ್ಸೋ ಕಾಯ್ದೆಯಂತೆ ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನೀಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂಭತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಈತನ ವಿರುದ್ಧ ಮೊಕದ್ದಮೆ ದಾಖಲಿಸಲಾಗಿತ್ತು. 2015ರ ಫೆಬ್ರವರಿ 15 ರಂದು ಅಪರಾಧಿ ಕೃತ್ಯ ಎಸಗಿದ್ದ. ಇದೀಗ ಸುದೀರ್ಘ ವಿಚಾರಣೆ ಬಳಿಕ ಅಪರಾಧ ಕೃತ್ಯ ಎಸಗಿರುವುದು ಸಾಬೀತಾಗಿದ್ದು, ಆತನಿಗೆ ಕಠಿಣ ಸಜೆ ವಿಧಿಸಲಾಗಿದೆ. ಇನ್ನು ದಂಡ ಮೊತ್ತವನ್ನು ದೌರ್ಜನ್ಯ ಗೊಳಗಾದ ಬಾಲಕಿಗೆ ನೀಡುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.