ಕರಾವಳಿ, ಸೆ 9(SM): ತೈಲ ದರ ಏರಿಕೆ ವಿರೋಧಿಸಿ ಸೆಪ್ಟೆಂಬರ್ 10ರ ಸೋಮವಾರದಂದು ಕಾಂಗ್ರೆಸ್ ನೀಡಿದ್ದ ಭಾರತ ಬಂದ್ ಕರೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಭಯ ಜಿಲ್ಲೆಗಳ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದ.ಕ. ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಸಿಕಾಂರ್ ಸೆಂಥಿಲ್ ಆದೇಶ ನೀಡಿದ್ದಾರೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ರಜೆ ಆದೇಶ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.