ಮಂಗಳೂರು, ಮಾ.27 (DaijiworldNews/HR): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 39 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 35,494ಕ್ಕೆ ಏರಿಕೆಯಾಗಿದೆ. ಈ ಪೈಕಿ 556 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 6,23,659 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 5,88,165 ನಕಾರತ್ಮಕವಾಗಿದೆ. ಈ ನಡುವೆ ಶನಿವಾರ 79 ಜನರನ್ನು ಬಿಡುಗಡೆ ಮಾಡಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 742 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಉಡುಪಿ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 156 ಹೊಸ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 737 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 4,11,752 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಶನಿವಾರ 171 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 190 ಸಾವುಗಳು ಸಂಭವಿಸಿವೆ.