ಮಂಗಳೂರು, ಮಾ 29 (DaijiworldNews/MS): ಪಾನಮತ್ತನಾಗಿ ಕಾರು ಚಲಾಯಿಸಿದ ಪಿಡಬ್ಲ್ಯೂಡಿ ಸಕಾರ್ಯನಿರ್ವಾಹಕ ಎಂಜಿನಿಯರ್ , ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪ್ತ್ಟಿರುವ ದಾರುಣ ಘಟನೆ ನಗರದ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಮಾ. 28 ರ ಭಾರವಿವಾರ ರಾತ್ರಿ ನಡೆದಿದೆ.
ಮೃತ ಪಾದಚಾರಿ ಆನಂದ
ಶಣ್ಮುಗಂ
ಮೃತ ವ್ಯಕ್ತಿಯನ್ನು ಬಿಎಸ್ ಎನ್ಎಲ್ ನ ನಿವೃತ್ತ ಉದ್ಯೋಗಿ ಆನಂದ ಎಂದು ಗುರುತಿಸಲಾಗಿದೆ. ಆರೋಪಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಮಂಗಳೂರು ಉಪ ವಿಭಾಗದ ಎಇಇ ಶಣ್ಮುಗಂ ಅವರನ್ನು ಬಂಧಿಸಲಾಗಿದೆ.
ರವಿವಾರ ರಾತ್ರಿ 9.53ಕ್ಕೆ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಆನಂದ ಅವರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಢಿಕ್ಕಿಯ ರಭಸಕ್ಕೆ ಪಾದಚಾರಿ ಆನಂದ ಸುಮಾರು ದೂರದವರೆಗೆ ಎಗರಿ ಬಿದ್ದು ಸಾವನ್ನಪ್ಪಿದ್ದಾರೆ
ಮೃತ ವ್ಯಕ್ತಿಯ ಪತ್ನಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.