ಉಡುಪಿ, ,ಸೆ10 (MSP):: ಭಾರತ್ ಬಂದ್ ಬೆಂಬಲಿಸುವಂತೆ ಒತ್ತಾಯಿಸಿ ಅಂಗಡಿಗಳನ್ನು ಮುಚ್ಚಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅದನ್ನು ವಿರೋಧಿಸಿದ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿಯಾಗಿರುವ ಘಟನೆ ಉಡುಪಿಯ ಕಡಿಯಾಳಿಯಲ್ಲಿ ವರದಿಯಾಗಿದೆ.
ಕಾಂಗ್ರೆಸ್ ನಗರ ಸಭಾ ಸದಸ್ಯ ರಮೇಶ್ ಕಾಂಚನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಬಂದ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಧಿಕ್ಕಾರ ಘೋಷಣೆಗಳನ್ನು ಕೂಗಿ ಒತ್ತಾಯಪೂರ್ವಕ ಬಂದ್ ಮಾಡಿಸುತ್ತಿದ್ದರು. ಬಲವಂತದ ಬಂದ್ ವಿರೋಧಿಸಿದ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಪ್ರಧಾನಿ ಮೋದಿಗೆ ಜೈಕಾರ ಕೂಗಿದರು. ಈ ಸಂದರ್ಭ ಎರಡು ವಿರೋಧಿ ಗುಂಪುಗಳ ನಡುವೆ ಪರಸ್ಪರ ವಾಗ್ವಾದ, ತಳ್ಳಾಟ ನಡೆದಿದಿದ್ದು ಗಲಾಟೆ ಪ್ರಾರಂಭವಾಗಿ
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪರಸ್ಪರ ತಳ್ಳಾಟ ಮಾಡಿಕೊಂಡ ಕಾರ್ಯಕರ್ತರನ್ನು ಬಿಡಿಸಲು ಪೊಲೀಸರು ಹರಸಾಹಸಪಟ್ಟು, ಎರಡು ಗುಂಪುಗಳ ಮನವೊಲಿಸಿ ಪರಿಸ್ಥಿತಿ ತಿಳಿಯಾಗಿಸಿದರು.