ಮೂಡುಬಿದಿರೆ, ಸೆ 12(MSP) : ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಮತ್ತೊರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಳ್ವಾಸ್ ಕಾಲೇಜಿನಲ್ಲಿ ಪಿಯುಸಿ ವಿಭಾಗದಲ್ಲಿ ಓದುತ್ತಿದ ವಿದ್ಯಾರ್ಥಿನಿ ಕಾಲೇಜಿನ ಹಾಸ್ಟೇಲ್ ನ ಕೊಠಡಿಯಲ್ಲಿ ಸೆ.12 ರ ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಬೆಂಗಳೂರಿನ ಅನೇಕಲ್ ನಿವಾಸಿ , ರಾಮಚಂದ್ರ ಅವರ ಪುತ್ರಿ, ವಿನುತಾ (18) ಎಂದು ಗುರುತಿಸಲಾಗಿದೆ. ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪಿಸಿಎಂ ಓದುತ್ತಿದ್ದ ವಿನುತಾ ಇಂದು ಬೆಳಗ್ಗೆ ಹಾಸ್ಟೆಲ್ ನಲ್ಲಿ ಬೆಳಗ್ಗೆ 6 ಗಂಟೆಯ ಸುಮಾರಿಗೆ ಆತ್ಮಹತ್ಯೆ ಶರಣಾಗಿದ್ದಾಳೆ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆಯೂ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಕಾವ್ಯಾ, ವಿದ್ಯಾರ್ಥಿನಿ ರಚನಾ, ಆತ್ಮಹತ್ಯೆ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು