ನವದೆಹಲಿ, ಸೆ 13(SM): ದೇಶದ ವಿವಿಧ ಬ್ಯಾಂಕ್ ಗಳಲ್ಲಿ ಸಾಲ ಮಾಡಿ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ವಿಜಯ್ ಮಲ್ಯ ದೇಶಬಿಟ್ಟು ಹೋಗುವುದು ಹಣಕಾಸು ಸಚಿವ ಅರುಣ್ ಜೇಟ್ಲಿಗೆ ಗೊತ್ತಿತ್ತು. ಆದರೆ, ಕೇಂದ್ರ ಸರಕಾರದ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಸಚಿವ ಅರುಣ್ ಜೇಟ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ದೇಶಬಿಟ್ಟು ಹೊರಡುವ ಮುನ್ನಾ ನಾನು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಆಗುವ ಯತ್ನ ಮಾಡಿದ್ದೇನೆ. ನಾನು ಲಂಡನ್ಗೆ ತೆರಳುತ್ತಿರುವ ಬಗ್ಗೆಯೂ ಅವರಿಗೆ ತಿಳಿಸಿದ್ದೆ ಎಂದು ಮಲ್ಯ ಹೇಳಿದ್ದು, ಇದು ರಾಷ್ಟ್ರ ರಾಜಕಾರಣದಲ್ಲಿ ಭಾರೀ ಕೋಲಾಹಲ ಸೃಷ್ಠಿಸಿತ್ತು. ಅಲ್ಲದೆ ಇದೀಗ ಬಿಸಿ ಬಿಸಿ ಚರ್ಚೆಯಲ್ಲಿರುವ ವಿಚಾರ ಕೂಡ ಆಗಿದೆ. ಈ ನಡುವೆ ಪ್ರತಿಪಕ್ಷ ಹಾಗೂ ಎಐಸಿಸಿ ಅಧ್ಯಕ್ಷರಾಗಿ ರಾಗಾ ಪ್ರತಿಕ್ರಿಯಿಸಿದ್ದಾರೆ. ವಿಜಯ್ ಮಲ್ಯ ಪ್ರಕಣದ ಬಗ್ಗೆ ತನಿಖೆ ನಡೆಸಲು ಮೋದಿ ಅವರು ಕೂಡಲೇ ವಿಶೇಷ ತಂಡ ರಚಿಸಬೇಕು. ಅಲ್ಲದೆ, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಕೂಡಲೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ತನಿಖೆ ಮುಗಿಯುವ ತನಕ ಅವರು ತಮ್ಮ ಸ್ಥಾನವನ್ನು ತ್ಯಜಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.