ಕಾಸರಗೋಡು, ಏ. 08 (DaijiworldNews/HR): ಎಸ್ಎಸ್ಎಲ್ಸಿ ಮತ್ತು ಪ್ಲಸ್ ಟು ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿದ್ದು, ಕೊರೊನಾ ಮಾನದಂಡಗಳನ್ನು ಪಾಲಿಸಿ ಪರೀಕ್ಷೆ ನಡೆಸಲಾಗುತ್ತಿದೆ.
ಸಾಂಧರ್ಭಿಕ ಚಿತ್ರ
ಮಾರ್ಚ್ ಮೊದಲವಾರದಲ್ಲಿ ನಡೆಯಬೇಕಿದ್ದ ಪರೀಕ್ಷೆಯನ್ನು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮುಂದೂಡಲಾಗಿದ್ದು, ಆನ್ಲೈನ್ ಕ್ಲಾಸ್ ಮೂಲಕ ಕಲಿತ ವಿದ್ಯಾರ್ಥಿಗಳು ಇಂದು ಪರೀಕಶಹೆ ಬರೆದಿದ್ದಾರೆ.
ಕೊರೊನಾ ಹಿನ್ನಲೆಯಲ್ಲಿ ಈ ವರ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಕಾಸರಗೋಡು ಜಿಲ್ಲೆಯಲ್ಲಿ 19,354 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದು, 152 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.
ಇನ್ನು 96 ಕೇಂದ್ರಗಳಲ್ಲಿ ಪ್ಲಸ್ ಟು ಪರೀಕ್ಷೆ ನಡೆಯುತ್ತಿದ್ದು, ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ.