ಮಂಗಳೂರು, ಏ.10 (DaijiworldNews/MB) : ಸಾರಿಗೆ ಮುಷ್ಕರ ನಡೆಯುತ್ತಿರವ ಹಿನ್ನೆಲಯೆಲ್ಲಿ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವುದರಿಂದಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏಪ್ರಿಲ್ 12 ರಂದು ನಿಗದಿಪಡಿಸಲಾಗಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಸಂಬಂಧ ಪರೀಕ್ಷಾಂಗ ಕುಲಸಚಿವರು ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೊಳಪಟ್ಟ ಎಲ್ಲಾ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.
ಇನ್ನು ಮುಂದೂಡಿದ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿದ ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಕೂಡಾ ವಿಶ್ವವಿದ್ಯಾಲನಿಯಲದ ಪರೀಕ್ಷಾಂಗ ಕುಲಸಚಿವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಇನ್ನು ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.