ಮಂಗಳೂರು, ಏ. 13 (DaijiworldNews/SM): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಮಂಗಳವಾರ 142 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 37,000ಕ್ಕೆ ಏರಿಕೆಯಾಗಿದೆ.
ಈ ಪೈಕಿ 976 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಒಟ್ಟು 6,68,999 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 6,31,999 ಮಂದಿಯ ವರದಿ ನಕಾರಾತ್ಮಕವಾಗಿದೆ. ಮಂಗಳವಾರ 76 ಜನರನ್ನು ಬಿಡುಗಡೆ ಮಾಡಲಾಗಿದೆ, ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 743 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲಾ ಇಂದಿನ ಕೊರೋನಾ ರಿಪೋರ್ಟ್:
ಮಂಗಳವಾರದಂದು ಜಿಲ್ಲೆಯಲ್ಲಿ 75 ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 26,148ಕ್ಕೆ ಏರಿಕೆಯಾಗಿದೆ. ಈ ಪೈಕಿ 436 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 4,49,966 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಮಂಗಳವಾರ 29 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 192 ಸಾವುಗಳು ಸಂಭವಿಸಿವೆ.