ಮಂಗಳೂರು, ಏ.14 (DaijiworldNews/MB) : ಮಂಗಳೂರು ವಿಶ್ವವಿದ್ಯಾಲಯದಿಂದ ಏಪ್ರಿಲ್ 15 ರಿಂದ ಪ್ರಾರಂಭವಾಗಲಿರುವ ಎಲ್ಲಾ ಪರೀಕ್ಷೆಗಳು ಈಗಾಗಲೇ ಪ್ರಕಟವಾದ ವೇಳಾಪಟ್ಟಿಯಂತೆ ನಡೆಯಲಿದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮಂಗಳೂರು ವಿವಿ ರಿಜಿಸ್ಟ್ರಾರ್ (ಪರೀಕ್ಷಾಂಗ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯವು ಏಪ್ರಿಲ್ 15 ರಿಂದ ನಿಗದಿಪಡಿಸಿರುವ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯಲಿದ್ದು, ಯಾವುದೇ ಬಲಾವಣೆ ಇರುವುದಿಲ್ಲ, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ ಪರೀಕ್ಷೆ ಬರೆಯಬೇಕು ಎಂದು ರಿಜಿಸ್ಟ್ರಾರ್ ಮನವಿ ಮಾಡಿದ್ದಾರೆ.