ಕಾಸರಗೋಡು, ಏ.15 (DaijiworldNews/MB) : ರಸ್ತೆ ದಾಟುತ್ತಿದ್ದಾಗ ಕಾರು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.
ಕಲ್ಲಂಗೈ ಬೆಳ್ಳೂರಿನ ಪದ್ಮನಾಭ (40) ಮೃತಪಟ್ಟವರು.
ರಸ್ತೆ ದಾಟುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಕೂಡಲೇ ಕಾಸರಗೋಡು ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ, ಮೃತಪಟ್ಟಿದ್ದಾರೆ. ಕಾರು ಕಾಸರಗೋಡಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು.
ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.