ಮೂಡುಬಿದ್ರೆ, ಏ.16 (DaijiworldNews/HR): ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ತಾಯಿ ಅಮಿದಾಬಿ (88) ಗುರುವಾರ ರಾತ್ರಿ ದೆಹಲಿಯಲ್ಲಿ ನಿಧನರಾಗಿದ್ದಾರೆ.
ಮೃತರು ಆರು ಮಂದಿ ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆಯ ಕಾನದವರಾದ ಅಮಿದಾಬಿ ಮಗನೊಂದಿಗೆ ದೆಹಲಿಯಲ್ಲಿ ನೆಲೆಸಿದ್ದರು.
ಪಾರ್ಥಿವ ಶರೀರವನ್ನು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ತಂದು ಬಳಿಕ ಅಯಂಬ್ಯುಲೆನ್ಸ್ ಮೂಲಕ ಮೂಡಬಿದಿರೆಯ ಕಾನದಲ್ಲಿರುವ ಸ್ವಗೃಹಕ್ಕೆ ಕರೆತಂದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.