ಕಟಪಾಡಿ, ಏ. 17 (DaijiworldNews/HR): ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಹೋಟೆಲ್ ವೃಂದಾವನ ಬಳಿ ದ್ದಾರಿ ಮಧ್ಯೆಯೇ ಆಕ್ಸಿಜನ್ ಸಿಲಿಂಡರ್ ಸಾಗಾಟದ ಟೆಂಪೋವೊಂದು ಪಲ್ಟಿಯಾಗಿರುವ ಘಟನೆ ಇಂದು ನಡೆದಿದೆ.
ಬ್ರಹ್ಮಾವರದತ್ತ ತೆರುಳುತ್ತಿದ್ದ ಟೆಂಪೋದಲ್ಲಿ ತಾಂತ್ರಿಕ ದೋಷದಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅದೃಷ್ಟವಶಾತ್ ಟೆಂಪೋದಲ್ಲಿದ್ದ ಚಾಲಕ ಮತ್ತು ನಿರ್ವಾಹಕರಿಗೆ ಪ್ರಾಣಹಾನಿಯಿಂದ ಪಾರಾಗಿದ್ದಾರೆ.
ಕಟಪಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ರಾ.ಹೆದ್ದಾರಿ ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.