ಮಂಗಳೂರು, ಏ.18 (DaijiworldNews/MB) : ಪ್ರತಿಭಾನ್ವಿತ ತುಳು ಸಿನಿಮಾ ನಿರ್ದೇಶಕ ರಘು ಶೆಟ್ಟಿ (40) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ರಘು ಶೆಟ್ಟಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು. ಆದರೆ ಶನಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಮೂಡುಬಿದಿರೆಯವರಾದ ರಘು ಅವರು ಅರ್ಜುನ್ ವೆಡ್ಸ್ ಅಮೃತ ತುಳು ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಜನಮನ್ನಣೆಗೆ ಪಾತ್ರರಾಗಿದ್ದರು. ಪ್ರಸ್ತುತ ಕನ್ನಡದ ಚಿತ್ರವೊಂದನ್ನು ನಿರ್ದೇಶನ ಮಾಡುತ್ತಿದ್ದರು.