ಮಂಗಳೂರು, ಏ. 18 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ರವಿವಾರ ಬರೋಬ್ಬರಿ 272 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ರವಿವಾರ 131 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಇನ್ನು ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ 744 ಮಂದಿ ಬಲಿಯಾಗಿದ್ದಾರೆ. ದ. ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 38,143 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 1,764 ಆಕ್ವೀವ್ ಕೇಸ್ ಗಳಿವೆ.