ಕಾಸರಗೋಡು, ಏ 19 (DaijiworldNews/MS): ಬಸ್ಸು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಏ.18ರ ಭಾನುವಾರ ರಾತ್ರಿ ಮಂಜೇಶ್ವರ ಹೊಸಂಗಡಿ ಪೇಟೆಯಲ್ಲಿ ನಡೆದಿದೆ.
ಮೃತರನ್ನು ಪೈವಳಿಕೆ ಬೀಡುಬೈಲ್ ನ ಶಶಿಧರ ( 26) ಎಂದು ಗುರುತಿಸಲಾಗಿದೆ . ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೇರಳ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ. ತಲಪಾಡಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಬಸ್ಸು ಡಿಕ್ಕಿ ಹೊಡೆದಿದ್ದು , ಇನ್ನೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಬೈಕ್ ಗೆ ಡಿಕ್ಕಿ ಹಿಡಿದಿರಬಹುದು ಎಂದು ಶಂಕಿಸಲಾಗಿದೆ .
ಅಪಘಾತದಲ್ಲಿ ಗಂಭೀರ ಗಾಯಗೊಂಡ ಶಶಿಧರನ್ನು ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದರು . ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ . ಅಪಘಾತಕ್ಕೆ ಕಾರಣವಾದ ಬಸ್ಸನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.